ಗೂಡ್ಸ್ ವಾಹನ ಢಿಕ್ಕಿ ಹೊಡೆದು ಟ್ಯೂಷನ್ ಗೆ ತೆರಳಿದ್ದ ಇಬ್ಬರು ಮಕ್ಕಳು ದುರ್ಮರಣ;ಇಡೀ ಊರಿನಲ್ಲಿ ಮೂಡಿದ ಸೂತಕದ ಛಾಯೆ
ರಾಮನಗರ;ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಇಬ್ಬರು ಮಕ್ಕಳು ಸಾವಿಗೀಡಾಗಿರುವ ಘಟನೆ ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ನಡೆದಿದೆ.
ರೋಹಿತ್ (5),ಶಾಲಿನಿ(8) ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಸುಚಿತ್,ಗೌತಮಿ,ಲೇಖನ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಟ್ಯೂಶನ್ ಮುಗಿಸಿ ಮನೆಗೆ ಹೊಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು.
ಮಕ್ಕಳಿಗೆ ಢಿಕ್ಕಿಯಾಗಿದ್ದ ಗೂಡ್ಸ್ ವಾಹನ ಚಾಲಕ ತನ್ನ ವಾಹನವನ್ನು ಬೇರೆಡೆ ನಿಲ್ಲಿಸಿ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳನ್ನು ಕಳೆದುಕೊಂಡ ಪೋಷಕರು ಆಕ್ರಂದನ ಮುಗಿಲುಮುಟ್ಟಿದೆ.ಇಡೀ ಊರಿಗೆ ಊರೇ ಸೂತಕದ ಛಾಯೆಯಲ್ಲಿ ಮುಳುಗಿದೆ.