ಮಧ್ಯರಾತ್ರಿ ಮಹಿಳೆಯೊಬ್ಬರು ಬೆತ್ತಲೆಯಾಗಿ ಓಡಾಟ ಮಾಡುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು,ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಉತ್ತರಪ್ರದೇಶ;ರಾಂಪುರದಲ್ಲಿ ಮಧ್ಯರಾತ್ರಿ ಮಹಿಳೆಯೊಬ್ಬರು ಬೆತ್ತಲೆಯಾಗಿ ಓಡಾಟ ಮಾಡುವುದು, ಸಿಕ್ಕ ಸಿಕ್ಕ ಮನೆಯ ಬಾಗಿಲು ಬಡಿಯುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು, ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಈ ಕುರಿತು ಪೊಲೀಸರು ಮಾಹಿತಿಯನ್ನು ನೀಡಿದ್ದು, ವಿಡಿಯೋದಲ್ಲಿ ಕಂಡು ಬಂದ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಿದ್ದಾರೆ.ಆಕೆ ಐದು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಂಪುರದ ಮಿಲಾಕ್ ಗ್ರಾಮದಲ್ಲಿ ಬೆತ್ತಲೆ ಮಹಿಳೆಯೊಬ್ಬರು ಮಧ್ಯರಾತ್ರಿಯಲ್ಲಿ ಮನೆ ಬಾಗಿಲು ಬಡಿದು ಓಡುವುದು ವಿಡಿಯೋದಲ್ಲಿ ಸೆರೆಯಾಗಿತ್ತು.ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದು, ಆ ಪ್ರದೇಶದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಕಳೆದ ಐದು ವರ್ಷಗಳಿಂದ ಬರೇಲಿ ಜಿಲ್ಲೆಯಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಮಹಿಳೆಯನ್ನು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬರಲಾಗಿದೆ ಎಂದು ಕೂಡ ಹೇಳಲಾಗಿತ್ತು.ಆದರೆ ಆಕೆ ಯಾರಿಗೂ ಹಾನಿ ಮಾಡಿಲ್ಲ ಮತ್ತು ಯಾವುದೇ ವ್ಯಕ್ತಿ ಆಕೆಗೆ ತೊಂದರೆ ನೀಡಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.