2024ರ ಲೋಕಸಭೆ ಚುನಾವಣೆಗೆ ಮುನ್ನ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮುಸ್ಲಿಂ ಮತದಾರರನ್ನು ಸೆಳೆಯುವ ಪ್ರಯತ್ನ ಆರಂಭಿಸಿದೆ. ಬಿಹಾರ ಸರ್ಕಾರವು ರಂಜಾನ್ ತಿಂಗಳಲ್ಲಿ ಮುಸ್ಲಿಂ ಉದ್ಯೋಗಿಗಳಿಗೆ ಕಚೇರಿ ಸಮಯವನ್ನು ಬದಲಾಯಿಸುವ ನಿರ್ಧಾರವನ್ನು ಪ್ರಕಟಿಸಿದೆ.
ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿದ ಸುತ್ತೋಲೆಯಲ್ಲಿ, ಮುಸ್ಲಿಂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ರಮಝಾನ್ ತಿಂಗಳಲ್ಲಿ ಕಚೇರಿಗೆ ನಿಗದಿತ ಅವಧಿಗಿಂತ ಒಂದು ಗಂಟೆ ತಡವಾಗಿ ಬರಲು ಹಾಗೂ ನಿಗದಿತ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಕಚೇರಿ ತೊರೆಯಲು ಬಿಹಾರ ಸರ್ಕಾರ ಅನುಮತಿ ನೀಡಿದೆ.
ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ರಂಜಾನ್‌ಗೆ ಮುಂಚಿತವಾಗಿ ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದೆ. ಪವಿತ್ರ ರಂಜಾನ್ ತಿಂಗಳಿನಲ್ಲಿ, ಆಂಧ್ರಪ್ರದೇಶ ಸರ್ಕಾರವು ತನ್ನ ಮುಸ್ಲಿಂ ಉದ್ಯೋಗಿಗಳಿಗೆ ಸಂಜೆ ಒಂದು ಗಂಟೆ ಮುಂಚಿತವಾಗಿ ಕೆಲಸ ಬಿಡಲು ಅನುಮತಿ ನೀಡಿದೆ.
ಪ್ರಧಾನ ಕಾರ್ಯದರ್ಶಿ ರೇವು ಮುತ್ಯಾಲ ರಾಜು ಹೊರಡಿಸಿರುವ ಸುತ್ತೋಲೆಯು ಮಾರ್ಚ್ 24 ರಿಂದ ಜಾರಿಗೆ ಬರಲಿದ್ದು, ಏಪ್ರಿಲ್ 23 ರವರೆಗೆ ಜಾರಿಯಲ್ಲಿರುತ್ತದೆ.