ನಾಯಿಗೆ ‘ನೂರಿ’ ಎಂದು ಹೆಸರಿಟ್ಟಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಮೊರೆ

ನವದೆಹಲಿ:ನಾಯಿಗೆ ‘ನೂರಿ’ ಎಂಬ ಹೆಸರಿಟ್ಟಿದ್ದಕ್ಕೆ ಎಐಎಂಐಎಂ ನಾಯಕನೋರ್ವ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಯಾಗ್‌ರಾಜ್‌ನ ಸ್ಥಳೀಯ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ನಾಯಿಯನ್ನು ರಾಹುಲ್, ತಾಯಿ ಸೋನಿಯಾ ಗಾಂಧಿಗೆ ಉಡುಗೊರೆಯಾಗಿ ನೀಡಿದ್ದು ನಾಯಿಗೆ ಇಟ್ಟ ಈ ಹೆಸರು ತಮ್ಮ ಧಾರ್ಮಿಕ ಭಾವನೆಗೆ ಘಾಸಿಗೊಳಿಸಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಐಎಂಐಎಂ ನಾಯಕ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ ಎಂದು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಕಚೇರಿ ದೃಢಪಡಿಸಿದೆ.

ಪಿಟಿಐ ಜೊತೆ ಮಾತನಾಡುತ್ತಾ ಫರ್ಹಾನ್ ಪರ ವಕೀಲ ಮೊಹಮ್ಮದ್ ಅಲಿ, ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ) ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವಿರಲ್ ಸಿಂಗ್ ಅವರ ನ್ಯಾಯಾಲಯಕ್ಕೆ ಸೋಮವಾರ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಸುದ್ದಿ ವಾಹಿನಿಗಳು ಮತ್ತು ಪತ್ರಿಕೆಗಳ ಮೂಲಕ ನಾಯಿಯ ಹೆಸರನ್ನು ಬದಲಿಸಿ, ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಸಲಹೆ ನೀಡಿದ್ದರು. ಆದರೆ ಅದು ಅವರ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ವಕೀಲರು ಹೇಳಿದರು.

ಈ ಹಿಂದೆ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿಗೆ ನಾಯಿಯನ್ನು ಉಡುಗೊರೆಯಾಗಿ ನೀಡಿದ ವಿಡಿಯೋವನ್ನು ವಿಶ್ವ ಪ್ರಾಣಿ ದಿನಾಚರಣೆಯಂದು ಪೋಸ್ಟ್ ಮಾಡಿದ್ದರು.

ಟಾಪ್ ನ್ಯೂಸ್