ರಾಹುಲ್ ಗಾಂಧಿಗೆ ಬಿಗ್ ಶಾಕ್; ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಹೊಸದಿಲ್ಲಿ: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.

ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸೂರತ್ ನ್ಯಾಯಾಲಯವು ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಬಳಿಕ ಶಿಕ್ಷೆ ವಿಧಿಸಿತ್ತು. ಇದರ ವಿರುದ್ಧ ರಾಹುಲ್ ಗಾಂಧಿ ಹೈಕೋರ್ಟ್​ ಮೆಟ್ಟಿಲೇರಿದ್ದರು.

ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ.ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರ ಏಕ ಪೀಠ ಈ ಕುರಿತು ತೀರ್ಪು ನೀಡಿದೆ.

ಮಾರ್ಚ್ 23 ರಂದು ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೀಗ ಹೈಕೋರ್ಟ್​ ಸೂರತ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ.

ತೀರ್ಪು ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಜಾಮೀನು ಸಿಕ್ಕಿದೆ. ಅವರು ಏಪ್ರಿಲ್ 3 ಕ್ಕೆ ತಮ್ಮ ಶಿಕ್ಷೆಯ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ಹೇಳಿದ್ದರು. ಈ ಕುರಿತು ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಟಾಪ್ ನ್ಯೂಸ್