ಮೋದಿ ಉಪನಾಮ ಪ್ರಕರಣ; ರಾಹುಲ್ ಗಾಂಧಿಗೆ ಬಿಗ್ ರಿಲೀಫ್, ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ

ನವದೆಹಲಿ;ಪ್ರಧಾನಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ವಿಧಿಸಿದ್ದ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಪ್ರಧಾನಿ ಮೋದಿ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.

ಸೂರತ್ ಶಾಸಕ ಪೂರ್ಣೇಶ್ ಮೋದಿ ದಾಖಲಿಸಿದ್ದ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಬಳಿಕ ಅವರು ಸಂಸತ್ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದರು.

ಈ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು, ನಂತರ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಟಾಪ್ ನ್ಯೂಸ್