ಸೂರತ್ ನ್ಯಾಯಾಲಯದ ಜೈಲು ಶಿಕ್ಷೆ ತೀರ್ಪಿನ ಬಗ್ಗೆ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಹೇಳಿದ್ದೇನು?

ನವದೆಹಲಿ;ಮೋದಿ ಹೆಸರಿನ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.ಇದರ ಬೆನ್ನಲ್ಲೇ 30 ದಿನಗಳ ಜಾಮೀನು ಕೂಡ ಸಿಕ್ಕಿತ್ತು.

ಪ್ರಕರಣದ ತೀರ್ಪು ಪ್ರಕಟವಾದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಪ್ರತಿಕ್ರಿಯಿಸಿ, “ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯ ಮೇಲೆ ಆಧಾರಿತವಾಗಿದೆ. ಸತ್ಯವೇ ನನ್ನ ದೇವರು, ಅಹಿಂಸೆಯೇ ಸತ್ಯವನ್ನು ಪಡೆಯುವ ಸಾಧನ ಎಂದು ಟ್ವೀಟ್ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ,ನಮ್ಮ ನಾಯಕ ರಾಹುಲ್​ ಗಾಂಧಿ ಅವರಿಗೆ ಪಕ್ಷದ ಮುಖಂಡರು ಬೆಂಬಲ ನೀಡಿದ್ದಾರೆ.ರಾಹುಲ್​ಗೆ ಜಾಮೀನು ಮಂಜೂರಾಗಿದೆ.ನಮಗೆ ಕಾನೂನು, ನ್ಯಾಯಾಂಗದಲ್ಲಿ ನಂಬಿಕೆ ಇದೆ.ಕಾನೂನು ಪ್ರಕಾರವೇ ಇದರ ವಿರುದ್ಧ ಹೋರಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ, ಕೇಂದ್ರ ಮತ್ತು ದಂಡ, ಶಿಕ್ಷೆ ಮತ್ತು ತಾರತಮ್ಯದ ಮೂಲಕ ರಾಹುಲ್ ಗಾಂಧಿ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಆದರೆ ನನ್ನ ಸಹೋದರ ಇಂಥದ್ದಕ್ಕೆಲ್ಲ ಯಾವತ್ತು ಹೆದರುವುದಿಲ್ಲ. ಅವರು ಸತ್ಯವನ್ನು ಮಾತನಾಡುವುದನ್ನು ಮುಂದುವರಿಸುತ್ತಾರೆ. ಸತ್ಯದ ಶಕ್ತಿ ಮತ್ತು ಇಡೀ ದೇಶದ ಜನರ ಪ್ರೀತಿ-ಅಭಿಮಾನ ಅವರೊಂದಿಗೆ ಇದೆ ಎಂದು ಹೇಳಿದ್ದಾರೆ.

ಇನ್ನು ರಾಹುಲ್​ ವಿರುದ್ಧ ಕೇಸ್​ ದಾಖಲಿಸಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಕೋರ್ಟ್​ ತೀರ್ಪು ಸ್ವಾಗತಿಸಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com