ಶಿಕ್ಷೆಗೆ ತಡೆ ಕುರಿತು ರಾಹುಲ್ ಗಾಂಧಿ ಪ್ರತಿಕ್ರಿಯಿಸಿ ಹೇಳಿದ್ದೇನು ಗೊತ್ತಾ?

ನವದೆಹಲಿ:ಮೋದಿ ಉಪನಾಮೆ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಗೆ ತಡೆ ವಿಚಾರವಾಗಿ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಸತ್ಯಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ. ನಮ್ಮ ಜೊತೆ ನಿಂತ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಲ್ಲದಿದ್ದರೆ ನಾಡಿದ್ದು ಸತ್ಯ ಗೆದ್ದೇ ಗೆಲ್ಲುತ್ತದೆ. ನನ್ನ ಹಾದಿ ಸ್ಪಷ್ಟವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನು ನಾನು ಏನು ಮಾಡಬೇಕು ಮತ್ತು ನನ್ನ ಕೆಲಸ ಏನು ಎಂದು ನನ್ನ ಮನಸ್ಸಿನಲ್ಲಿ ಸ್ಪಷ್ಟತೆ ಇದೆ.ನಮಗೆ ಸಹಾಯ ಮಾಡಿದ ಜನರಿಗೆ ನಾನು ಧನ್ಯವಾದಗಳು.ಜನರ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್