ಕಾಂಗ್ರೆಸ್ ಕಾರ್ಯಕರ್ತನಿಗೆ ಅಟ್ಟಾಡಿಸಿ ಬರ್ಬರವಾಗಿ ಕೊಲೆ

ಕಾಂಗ್ರೆಸ್ ಕಾರ್ಯಕರ್ತನಿಗೆ ಅಟ್ಟಾಡಿಸಿ ಬರ್ಬರವಾಗಿ ಕೊಲೆ

ಬೆಂಗಳೂರು:ಕಾಂಗ್ರೆಸ್ ಕಾರ್ಯಕರ್ತನಿಗೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಗ್ಗೆರೆ ಬಳಿ ಚೌಡೇಶ್ವರಿನಗರದ ಹೋಟೆಲ್ ಬಳಿ ನಡೆದಿದೆ.

ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42) ಎಂಬುವವರನ್ನು ಬೈಕ್​ಗಳಲ್ಲಿ ಬಂದ ಐದಾರು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ರವಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹೊಟೇಲ್ ವೊಂದರ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಲಾಗಿದೆ.

ರವಿ ಕೊಲೆ ಮಾಡಿದ ಹಂತಕರು ಕೊಲೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ರವಿಕುಮಾರ್ ಅವರ ಫ್ಲೆಕ್ಸ್ ಹರಿದು ಹಾಕಿದ್ದಾರೆ ಎನ್ನಲಾಗಿದೆ.

ವೃತ್ತಿಯಲ್ಲಿ ಟೆಂಪೋ ಟ್ರಾವೆಲರ್ ಚಾಲಕ ಹಾಗೂ ಮೇಕೆ ಸಾಕಾಣಿಕೆದಾರನಾಗಿದ್ದ ರವಿ, ಸಂಜೆ ಕೆಲಸ ಮುಗಿಸಿ ಮನೆ ಹತ್ತಿರ ತೆರಳಿದ್ದ.ಆ ಬಳಿಕ ಬಾರ್​ಗೆ ಬಂದು ಕುಡಿದು ಏರಿಯಾದ ಕೃಷ್ಣಮೂರ್ತಿ ಎಂಬ ಕಾಂಗ್ರೆಸ್ ಮುಖಂಡನ ಬರ್ತಡೆ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಪಾರ್ಟಿ ಮುಗಿಸಿ ರವಿ ಮನೆಗೆ ಬರುವಾಗ ಹಂತಕರು ಹತ್ಯೆ ಮಾಡಿದ್ದಾರೆ. ತಪ್ಪಿಸಿಕೊಳ್ಳಲು ಓಡಿದ ರವಿಯನ್ನು ಅಟ್ಟಾಡಿಸಿ ಹತ್ಯೆಗೈಯ್ಯಲಾಗಿದೆ.

ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶವವನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂಕತರ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com