ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ!

ಬೆಂಗಳೂರು:ದೆಹಲಿಯ ಆಕರ್ಷಕ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಗಳ ಈ ಬಾರಿ ಅವಕಾಶ ನೀಡಲಾಗಿಲ್ಲ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಿರಿಧಾನ್ಯ ವೈವಿಧ್ಯತೆಯನ್ನು ಬಿಂಬಿಸಲು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವವನ್ನು ಕೇಂದ್ರ ನಿರಾಕರಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದರಿಂದಾಗಿ ಜನವರಿ 26ರಂದು ನವದೆಹಲಿಯ ಕರ್ತವ್ಯಪಥದಲ್ಲಿ ನಡೆಯಲಿರುವ ವರ್ಣರಂಜಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಪ್ರಾತಿನಿಧ್ಯ ಇರುವುದಿಲ್ಲ ಎಂದು ವರದಿ ತಿಳಿಸಿದೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ಥಬ್ದ ಚಿತ್ರ ಇರಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹರ್ಷ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್