ಮುಸ್ಲಿಮರ ಮೀಸಲಾತಿ ರದ್ಧತಿಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಸಿಎಂ ಬೊಮ್ಮಯಿ& ಈಶ್ವರಪ್ಪ ಹೇಳಿದ್ದೇನು ಗೊತ್ತಾ?

ಬೆಂಗಳೂರು:ಮುಸ್ಲಿಮರಿಗೆ ಮೀಸಲಾಗಿದ್ದ 2bಯಡಿ 4% ಮೀಸಲಾತಿಯನ್ನು ರಾಜ್ಯ ಸರಕಾರ ರದ್ದುಪಡಿಸಿತ್ತು.ಈ ಕುರಿತು ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮೇ.9ರವರಗೆ ಸರಕಾರದ ಆದೇಶದನ್ವಯ ಯಾವುದೇ ನೇಮಕಾತಿ, ಪ್ರವೇಶಾತಿ ಮಾಡಬಾರದೆಂದು ಆದೇಶಿಸಿದೆ.

ಈ ವಿಚಾರವಾಗಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ

ಧಾರವಾಡದಲ್ಲಿ ಮಾತನಾಡಿದ ಬೊಮ್ಮಾಯಿ,ಸರ್ವೋಚ್ಚ ನ್ಯಾಯಾಲಯವು ಮೇ.9ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್ ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. 10ರಷ್ಟು ಮೀಸಲಾತಿಗೆ ಅರ್ಹರಾಗಿರುವ ಆರ್ಥಿಕವಾಗಿ ದುರ್ಬಲ ವರ್ಗದಲ್ಲಿ ಮುಸ್ಲಿಮರನ್ನು ಇರಿಸಲಾಗಿದೆ. ನಾಲ್ಕು ಪರ್ಸೆಂಟ್ ಪಡೆಯುತ್ತಿದ್ದವರನ್ನು 10 ಪರ್ಸೆಂಟ್ ಕೆಟಗರಿಗೆ ಹಾಕಲಾಗಿದೆ. ಇದರಿಂದ ಯಾವುದೇ ಅನ್ಯಾಯ ಆಗಿಲ್ಲ ಎಂದರು.

ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಸುಪ್ರೀಂ ಆದೇಶಕ್ಕೆ ತಡೆ ಕೊಟ್ಟಿದೆ ಹೊರತಯ, ರದ್ದು ಮಾಡಿಲ್ಲ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿ ತಡೆಯನ್ನು ತೆರವು ಮಾಡಿಸುತ್ತೇವೆ. ಲಿಂಗಾಯತ, ಒಕ್ಕಲಿಗರಿಗೆ ಮೀಸಲಾತಿಯನ್ನು ಜಾಸ್ತಿ ಮಾಡಿದ್ದೇವೆ. ಸಾಮಾನ್ಯ ವ್ಯವಸ್ಥೆಯಲ್ಲಿ ಶೇಕಡಾ 10ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ಕೊಟ್ಟಿದ್ದೇವೆ. ಈ ಎಲ್ಲಾ ಅಂಶಗಳನ್ನು ಸುಪ್ರೀಂ ಕೋರ್ಟ್‌ಗೆ ತಿಳಿಸಿ ತಡೆಯನ್ನು ತೆರವುಗೊಳಿಸುತ್ತೇವೆ ಎಂದು ಹೇಳಿದ್ದಾರೆ‌.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com