ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಪೋಸ್ಟ್ ಭಾರೀ ವೈರಲ್…

ಬೆಂಗಳೂರು:ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ.ರೂಪ ಅವರು ಸಮರ ಸಾರಿದ್ದಾರೆ.

ಬೆಳಗ್ಗೆ 19 ಆರೋಪಗಳ ಪಟ್ಟಿ ಪೋಸ್ಟ್ ಮಾಡಿದ್ದ ಐಪಿಎಸ್ ಡಿ.ರೂಪ ಅವರು ಈಗ ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಫೋಟೋಗಳನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

ಡಿ. ರೂಪ ಅವರು ರೋಹಿಣಿ ಸಿಂಧೂರಿ ಅವರ ಕೆಲವು ಖಾಸಗಿ ಚಿತ್ರಗಳನ್ನು ಫೋಸ್ಟ್ ಮಾಡಿದ್ದು, ಈ ರೀತಿಯ ಪೋಟೊಗಳು ನಾರ್ಮಲ್ ಅನ್ನಿಸಬಹುದು. ಆದರೆ, ಒಬ್ಬ ಮಹಿಳಾ ಐಎಎಸ್ ಅಧಿಕಾರಿ ಒಂದಲ್ಲ, ಎರಡಲ್ಲ ಮೂರು ಐಎಎಸ್ ಪುರುಷ ಅಧಿಕಾರಿಗಳಿಗೆ ಆಗಾಗ ಇವುಗಳನ್ನು ಹಾಗೂ ಈ ರೀತಿಯ ಅನೇಕ ಪಿಕ್ಸ್ ಗಳನ್ನು ಕಳಿಸ್ತಾರೆ ಅಂದ್ರೆ ಅದಕ್ಕೆ ಏನರ್ಥ? ಇದು ಆಕೆಯ ಖಾಸಗಿ ವಿಷಯ ಆಗುವುದಿಲ್ಲ ಐಎಎಸ್ SERVICE CONDUCT RULES ಪ್ರಕಾರ ಅಪರಾಧ. ಈ ಪಿಕ್ಸ್ ಗಳ ನೈಜತೆ ಬಗ್ಗೆ ಯಾವುದೇ ತನಿಖಾ ಸಂಸ್ಥೆ ಕೂಡಾ ತನಿಖೆ ಮಾಡಬಹುದು. ಸಲೂನ್ ಹೇರ್ ಕಟ್, ತಲೆದಿಂಬು ಇತ್ತು ಮಲಗಿ ತೆಗೆದಿರುವ ಚಿತ್ರ. ನಾರ್ಮಲ್ ಅನ್ನಿಸಬಹುದು ಕೆಲವರಿಗೆ ಎಂದು ತಮ್ಮ ಫೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತ ಡಿ.ರೂಪಾ ಅವರ ಫೇಸ್ ಬುಕ್ ಪೋಸ್ಟ್ ಭಾರೀ ವೈರಲ್ ಆಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com