ಬಿಜೆಪಿ ಶಾಸಕ ರಾಮದಾಸ್ ಬಂಡಾಯ? ಟಿಕೆಟ್ ಕೈತಪ್ಪಿದ ಬಗ್ಗೆ ಅವರು ಹೇಳಿದ್ದೇನು ಗೊತ್ತಾ?

ಮೈಸೂರು:ಬಿಜೆಪಿ‌ ನಿನ್ನೆ ಚುನಾವಣೆಗೆ ಸ್ಪರ್ಧಿಸುವ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಸಚಿವ, ಹಿರಿಯ ಶಾಸಕ
ಎಸ್‌ಎ ರಾಮದಾಸ್‌ಗೆ ಟಿಕೆಟ್ ಕೈತಪ್ಪಿದೆ.

ಇದರಿಂದ ಕೃಷ್ಣರಾಜ ಕ್ಷೇತ್ರದಿಂದ ಎಸ್‌ಎ ರಾಮದಾಸ್‌ಗೆ ಬದಲಿಗೆ ಶ್ರೀವತ್ಸ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆ ಅಸಮಾಧಾನ ಹೊರಹಾಕಿರುವ ರಾಮದಾಸ್, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ ಎಂದು ಹೇಳಿದ್ದಾರೆ.

ಟಿಕೆಟ್ ಘೋಷಣೆ ಬಳಿಕ ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಹಾಗೂ ಸಂಸದ ಪ್ರತಾಪ್ ಸಿಂಹ, ರಾಮದಾಸ್ ಅವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ರಾಮದಾಸ್ ತಾವು ಯಾರೊಂದಿಗೂ ಮಾತನಾಡುವುದಿಲ್ಲ ಎಂದು ಹೇಳಿ ಅವರನ್ನು ಆಗೆಯೇ ಕಳುಹಿಸಿದ್ದಾರೆ.

ತಾಯಿ ಮನೆಯಿಂದ ನನ್ನನ್ನು ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ನಾನು ಇರಬೇಕಾ ಅಥವಾ ಬೇಡವಾ ಎಂಬುದುನ್ನು ಮಂಗಳವಾರ ಸಂಜೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com