ಪ್ರತಿಪಕ್ಷದ ನಾಯಕ‌ನ ಆಯ್ಕೆ ಬಗ್ಗೆ ಸದಾನಂದ ಗೌಡರು ಹೇಳಿದ್ದೇನು?

ಚಾಮರಾಜನಗರ; ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು ಹೇಳಿದ್ದಾರೆ.

ಇಂದು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ ಮಾಡಲಾಗುವುದು ಎಂದರು.

ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ಅವರಿಗೆ ಸವಾಲು ಹಾಕುವ ವ್ಯಕ್ತಿ ಬೇಕು. ಅಂತಹ ಸೂಕ್ತ ನಾಯಕನನ್ನು ನಾವು ಕೊಡುತ್ತೇವೆ. ಅಳೆದು ತೂಗಿ ರಾಷ್ಟ್ರೀಯ ನಾಯಕರು ವಿಪಕ್ಷ ನಾಯಕನನ್ನು ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ಜುಲೈ 3ರಿಂದ 10 ದಿನ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಜುಲೈ 7ರಂದು ಸಿದ್ದರಾಮಯ್ಯನವರು ಈ ಅವಧಿಯ ಮೊದಲ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಅಧಿವೇಶನ ಆರಂಭಕ್ಕೂ ಮುನ್ನ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್​ ಮುಂದಾಗಿದೆ.

ಯತ್ನಾಳ್, ಬೊಮ್ಮಯಿ, ಅರವಿಂದ್ ಬೆಲ್ಲದ್ ಸೇರಿ ಹಲವು ಬಿಜೆಪಿ ನಾಯಕರು ಪ್ರತಿಪಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದು, ಯಾರನ್ನು ಆಯ್ಕೆ ಮಾಡಿದರೆ ಸೂಕ್ತ ಎಂದು ಬಿಜೆಪಿ‌ ಚಿಂತನೆ ನಡೆಸುತ್ತಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ