-ಮುಹಮ್ಮದ್ ಸಫ್ವಾನ್ ಎ.ಕೆ.(27)ಮೃತ ಯುವಕ
ಬ್ರಹ್ಮಾವರ;ದ್ವಿಚಕ್ರ ವಾಹನಗಳೆರಡರ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಇನ್ನೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢಶಾಲೆ ಬಳಿ ನಡೆದಿದೆ.
ಹೈಕಾಡಿಯ ಮುಹಮ್ಮದ್ ಸಫ್ವಾನ್ ಎ.ಕೆ.(27)ಮೃತ ಯುವಕ.ಸ್ಕೂಟರ್ ಸವಾರ ಭುಜಂಗ ಶೆಟ್ಟಿ(68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಾಲಾಡಿ ಮಾರ್ಗವಾಗಿ ಸಾಯಿಬರಕಟ್ಟೆ ಕಡೆಯಿಂದ ಬ್ರಹ್ಮಾವರದ ಕಡೆಗೆ ಹೋಗುತ್ತಿದ್ದ ಬೈಕಿಗೆ ಬ್ರಹ್ಮಾವರ ಕಡೆಯಿಂದ ಸಾಯಿಬರ ಕಟ್ಟೆ ಕಡೆಗೆ ಬರುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಬೈಕ್ ಮತ್ತು ಸ್ಕೂಟರ್ ಸವಾರಿಬ್ಬರೂ ರಸ್ತೆಯ ಮೇಲೆ ಬಿದ್ದು ಗಾಯಗೊಂಡಿದ್ದರು.
ಇವರಿಬ್ಬರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಸಫ್ವಾನ್ ತಡರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.