ಬಂಟ್ವಾಳ; ಸಜಿಪ ಬಳಿ ಮನೆಯ ಮೇಲೆ ಗುಡ್ಡೆ ಕುಸಿತ, ಮಹಿಳೆ ಮೃತ್ಯು

-ಝರೀನಾ ಮೃತರು.

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪುಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಮತ್ತೋರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಮೃತರು ಮನೆಯೊಳಗೆ ಸಿಲುಕಿದ್ದ ಶಫಾ(20) ಅವರನ್ನು ತಕ್ಷಣ ರಕ್ಷಣೆ ಮಾಡಲಾಗಿದೆ.

ಗುಡ್ಡೆ ಕುಸಿದ ಬಳಿಕ ಕಾಲ ರಕ್ಷಣಾ ಕಾರ್ಯ ದಲ್ಲಿ ಸ್ಥಳೀಯರು ತೊಡಗಿದ್ದರು.

ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ರಕ್ಷಣಾ ಕಾರ್ಯವನ್ನು ನಡೆಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್