ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು

ಬೆಂಗಳೂರು; ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಲು ಮರದ ತಿಮ್ಮಕ್ಕ ಬಾತ್ ರೂಮ್​​​​​ನಲ್ಲಿ ಕಾಲು ಜಾರಿ ಬಿದ್ದ ಕಾರಣ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಮಕೂರಿನ ಗುಬ್ಬಿಯವರಾದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ಪತಿಯೊಂದಿಗೆ ಸೇರಿ ಮರಗಳನ್ನು ಬೆಳೆಸಿದ್ದರು. ಮೊದಲ ವರ್ಷದಲ್ಲಿ ದಂಪತಿಗಳು 4 ಕಿಮೀ ರಸ್ತೆಯ ಎರಡು ಬದಿಗಳಲ್ಲಿ 10 ಆಲದ ಸಸಿಗಳನ್ನು ನೆಟ್ಟು ಬೆಳೆಸಲು ಆರಂಬಿಸಿದ್ದರು. ಇಲ್ಲಿವರೆಗೂ ತಿಮ್ಮಕ್ಕ ಅವರು 8 ಸಾವಿರಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದಾರೆ.

ಟಾಪ್ ನ್ಯೂಸ್