ಸನಾತನ ಧರ್ಮವನ್ನು ಎಚ್‌ಐವಿ & ಕುಷ್ಠರೋಗಕ್ಕೆ ಹೋಲಿಸಿದ ಸಂಸದ; ದೂರು

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಬೆಂಬಲಿಸಿ ಪ್ರತಿಕ್ರಿಯಿಸಿದ ಡಿಎಂಕೆ ಸಂಸದ ಎ ರಾಜಾ, ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ್ದರು.

ಈ ಕುರಿತು ಎ ರಾಜಾ ವಿರುದ್ಧ ದೆಹಲಿ ಪೊಲೀಸರಿಗೆ ವಕೀಲ ವಿನೀತ್ ಜಿಂದಾಲ್ ಅವರು ದೂರು ನೀಡಿದ್ದಾರೆ.

ಸನಾತನ ಧರ್ಮವನ್ನು ಅವಮಾನಿಸಲಾಗುತ್ತಿದೆ.ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸುತ್ತಿದೆ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎ.ರಾಜಾ,ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಸಮರ್ಥಿಸಿ ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್