ಬೆಂಗಳೂರು; ಸ್ಯಾಂಟ್ರೋ ರವಿ ಹೆಚ್ಚಿನ ಮಾತ್ರೆ ಸೇವಿಸಿರುವ ಸಂಶಯ ವ್ಯಕ್ತವಾಗಿದೆ.ರವಿ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ ಎಂದು ಬರೆದುಕೊಂಡಿದೆ. ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಮುಖ್ಯಮಂತ್ರಿ ಬೊಮ್ಮಾಯಿಯವರೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.
ಸಿಐಡಿ ವಶದಲ್ಲಿದ್ದ ಸ್ಯಾಂಟ್ರೊ ರವಿ ಹೆಚ್ಚಾಗಿ ಔಷಧ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.