BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ ಆದರೆ ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದೀಗ ಇರ್ಗೀಶ್ ಕುಟುಂಬ ಪ್ರತಿಭಟನೆ ನಡೆಸುತ್ತಿದೆ.

ಮಂಡ್ಯ ಜಿಲ್ಲೆ ಮಳವಳ್ಳಿಯ ಇರ್ಗೀಷ್ ಪಾಷಾ (35) ಸಾವನ್ನಪ್ಪಿದ ವ್ಯಕ್ತಿ.ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಬಳಿ ಇರ್ಗೀಷ್ ಪಾಷಾ ಶವ ಪತ್ತೆಯಾಗಿದ್ದು, ಆಕ್ರೋಶಗೊಂಡ ಕುಟುಂಬಸ್ಥರು ಸಾತನೂರು ಠಾಣೆ ಬಳಿ ಪ್ರತಿಭಟನೆ ನಡೆಸಿ ಇರ್ಗೀಷ್ ಪಾಷಾ ಸಾವಿಗೆ ಪುನೀತ್ ಕೆರೆಹಳ್ಳಿ ಕಾರಣ ಎಂದು ಆರೋಪಿಸಿದ್ದಾರೆ. ಕೂಡಲೇ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕ್ಯಾಂಟರ್ ವಾಹನದಲ್ಲಿ ಇರ್ಗೀಷ್ ಪಾಷಾ 16 ಜಾನುವಾರುಗಳನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ.ಈ ವಿಚಾರ ತಿಳಿದ ಹಿಂದೂ ಕಾರ್ಯಕರ್ತ ಪನೀತ್ ಕೆರೆಹಳ್ಳಿ ಮತ್ತು ತಂಡ ವಾಹನದ ಮೇಲೆ ದಾಳಿ ನಡೆಸಿದೆ ಎಂದು ವರದಿಯಾಗಿದೆ.

ವಾಹನದಲ್ಲಿದ್ದ 16 ಜಾನುವಾರುಗಳನ್ನು ರಕ್ಷಿಸಲಾಗಿತ್ತು. ಜಾನುವಾರು ರಕ್ಷಣೆ ಸಂಬಂಧ ಸಾತನೂರು ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ದಾಳಿ ನಡೆದ ಸ್ವಲ್ಪ ದೂರದಲ್ಲೇ ಇರ್ಗೀಷ್ ಪಾಷಾ ಅನುಮಾನಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಪಾಷಾ ಸಾವಿಗೆ ಪುನೀತ್ ಕೆರೆಹಳ್ಳಿ ಕಾರಣ ಎಂದು ಮೃತನ ಕುಟುಂಬಸ್ಥರು ಆರೋಪಿಸಿದ್ದು ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರ್ ಪತ್ನಿಗೆ ನಾನು ಕೆಲಸ ಕೊಡುತ್ತೇನೆ, ನಳಿನ್ ಕುಮಾರ್ ರಾಜೀನಾಮೆ ಕೊಡಲಿ- ಪ್ರತಿಭಾ ಕುಳಾಯಿ ಏನೆಲ್ಲಾ ಹೇಳಿದ್ರು?

ಮಂಗಳೂರು:ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ವಾಗ್ದಾಳಿ ನಡೆಸಿದ್ದಾರೆ.

Developed by eAppsi.com