ನನ್ನ ಕೊಲೆ ನಡೆದರೆ ಬಿಜೆಪಿ ರಾಜಾಧ್ಯಕ್ಷರು ನೇರ ಹೊಣೆ- ಸತ್ಯಜಿತ್ ಸುರತ್ಕಲ್ ಹೇಳಿಕೆ

ಮಂಗಳೂರು:ಸರಕಾರ ನೀಡಿದ್ದ ಗನ್ ಮ್ಯಾನ್ ಭದ್ರತೆಯನ್ನು ಹಿಂಪಡೆದ ಬಗ್ಗೆ ದ.ಕ ಜಿಲ್ಲಾ ಹಿಂದೂ ಜಾಗರಣ ವೇದಿಕೆಯ ಮುಖಂಡ ಸತ್ಯಜಿತ್ ಸುರತ್ಕಲ್ ಪ್ರತಿಕ್ರಿಯಿಸಿದ್ದಾರೆ‌.

ಬಿಜೆಪಿ ರಾಜ್ಯಾಧ್ಯಕ್ಷರ ಕೈವಾಡದಿಂದ ನನಗೆ ನೀಡಿರುವ ಭದ್ರತೆಯನ್ನು ಹಿಂಪಡೆಯಲಾಗಿದೆ. ನನ್ನ ಬಾಯಿ ಮುಚ್ಚಿಸುವ ಸಲುವಾಗಿ ಸತತ ಎರಡು ಮೂರು ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ.

ಈ ಬಗ್ಗೆ ಗೃಹ ಮಂತ್ರಿಯವರಲ್ಲಿ ಹಾಗೂ ಸಚಿವೆ ಶೋಭಾ ಕರಂದ್ಲಾಜೆಯವರಲ್ಲಿ ಮಾತನಾಡಿದ್ದೇನೆ. ನನ್ನ ಕೊಲೆ ನಡೆದರೆ ಬಿಜೆಪಿ ರಾಜಾಧ್ಯಕ್ಷ ಹಾಗೂ ಅವರ ತಂಡ ನೇರ ಹೊಣೆ ಎಂದು ಸತ್ಯಜೀತ್ ಸುರತ್ಕಲ್ ಆರೋಪಿಸಿದ್ದಾರೆ.

ಸರಕಾರ ಕಳೆದ 16 ವರ್ಷಗಳಿಂದ ಪೊಲೀಸ್ ಗನ್ ಮ್ಯಾನ್ ಮೂಲಕ ಭದ್ರತೆಯನ್ನು ಕಲ್ಪಸಿತ್ತು.ಆದರೆ ಇತ್ತಿಚೆಗೆ ಬಂದ ಪತ್ರದಲ್ಲಿ ಶುಲ್ಕ ಪಾವತಿಸಿ ಭದ್ರತಾ ಸಿಬ್ಬಂದಿಯನ್ನು ಪಡೆದುಕೊಳ್ಳುವಂತೆ ಆದೇಶಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ದ.ಕ ಜಿಲ್ಲಾ ಹಿಂದು ಜಾಗರಣಾ ವೇದಿಕೆಯ ಇತರ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com