ಕೆಎಸ್ಸಾರ್ಟಿಸಿ ಬಸ್ ನಲ್ಲಿ ಹಸ್ತಮೈಥುನ ಮಾಡಿದ ಆರೋಪ, ಯುವಕನ ಬಂಧನ

-ಸವದ್ ಶಾ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಕೊಚ್ಚಿ: ಎರ್ನಾಕುಲಂ ಜಿಲ್ಲೆಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆರೋಪಿಯನ್ನು ಎರ್ನಾಕುಲಂನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತ್ರಿಶೂರ್ ಜಿಲ್ಲೆಯವರಾದ ನಂದಿತಾ ಶಂಕರ ಅವರು ದೂರು ನೀಡಿದ ನಂತರ ಮಂಗಳವಾರ ನಡೆದ ಘಟನೆ ಬೆಳಕಿಗೆ ಬಂದಿದೆ ಮತ್ತು ಘಟನೆಯ ವೀಡಿಯೊಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಆರೋಪಿ ತನ್ನ ಪ್ಯಾಂಟ್ ಅನ್ನು ಬಿಚ್ಚಿ, ಹಸ್ತಮೈಥುನ ಮಾಡಿಕೊಂಡಿದ್ದಾನೆ ಎಂದು ನಂದಿತಾ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಆರೋಪಿಯನ್ನು ಕೋಯಿಕ್ಕೋಡ್ ಮೂಲದ ಸವದ್ ಶಾ (27) ಎಂದು ಗುರುತಿಸಲಾಗಿದೆ.

ಎರ್ನಾಕುಲಂ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಅಥಣಿಯಲ್ಲಿ ಈ ಘಟನೆ ನಡೆದಿದೆ. ನಂದಿತಾ ಸಿನಿಮಾ ಶೂಟಿಂಗ್‌ಗಾಗಿ ಎರ್ನಾಕುಲಂಗೆ ಹೋಗುತ್ತಿದ್ದರು. ಸವಾದ್ ಅಂಗಮಾಲಿಯಿಂದ ಈ ಬಸ್‌ಗೆ ಹತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ Instagram ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದರು.

ಪೊಲೀಸರ ಪ್ರಕಾರ, ಆರೋಪಿ ಸವಾದ್ ನಂದಿತಾ ಮತ್ತು ಇನ್ನೊಬ್ಬ ಮಹಿಳಾ ಪ್ರಯಾಣಿಕರ ನಡುವೆ ಸೀಟಿನಲ್ಲಿ ಕುಳಿತಿದ್ದ.

ಬಸ್ ಅಂಗಮಾಲಿಯಿಂದ ಹೊರಟ ನಂತರ, ಆರೋಪಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದನು. ಆರಂಭದಲ್ಲಿ, ನಂದಿತಾ ಅದನ್ನು ನಿರ್ಲಕ್ಷಿಸಿದಳು. ಸ್ವಲ್ಪ ಸಮಯದ ನಂತರ, ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದಾಗ, ನಂದಿತಾ ಸಿಟ್ಟಿಗೆದ್ದಳು” ಎಂದು ಪೊಲೀಸರು ತಿಳಿಸಿದ್ದಾರೆ.

ಅಥಣಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ಬಸ್ ನಿಲ್ಲಿಸಿದಾಗ, ಅವನು ಹೊರಗೆ ಹಾರಿ ಓಡಿಹೋದನು. ಕಂಡಕ್ಟರ್ ಅವನನ್ನು ಹಿಡಿಯಲು ಪ್ರಯತ್ನಿಸಿದನು ಆದರೆ ಸವದ್ ಷಾ ಓಡಿಹೋದನು. ನಂತರ ಸ್ಥಳೀಯರು ಮತ್ತು ಇತರ ಪ್ರಯಾಣಿಕರು ಅವನನ್ನು ಹಿಡಿದುಕೊಂಡರು. ನಂತರ ಅವರನ್ನು ನೆಡುಂಬಶ್ಶೇರಿ ಪೊಲೀಸರಿಗೆ ಒಪ್ಪಿಸಲಾಯಿತು ಎಂದು ಹೇಳಿದರು.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com