ಸೌದಿ ಅರೇಬಿಯಾದ;ರಿಯಾದ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರಾವಳಿ ಮಂಗಳೂರಿನ ಮೂವರು ಸೇರಿ
ಒಟ್ಟು ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ
ಅಕೀಲ್, ನಾಸಿರ್, ರಿಝ್ವಾನ್, ಶಿಹಾಬ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯಲ್ಲಿ ಇವರು ತೆರಳುವಾಗ ಒಂಟೆಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತದೇಹಗಳನ್ನು ಅಲ್ ಹಸ್ಸಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಕೀಲ್ ಅವರು ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿ ಎಂದು ತಿಳಿದುಬಂದಿದೆ.