ಸೌದಿ ಅರೇಬಿಯಾ; ಅಪಘಾತದಲ್ಲಿ ಉಮ್ರಾ ಯಾತ್ರೆಗೆ ತೆರಳಿದ್ದ ಕರ್ನಾಟಕದ ಐವರು ಮೃತ್ಯು

ಸೌದಿ ಅರೇಬಿಯಾ:ಮೆಕ್ಕಾದಲ್ಲಿ ಉಮ್ರಾ ಯಾತ್ರೆ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಕಲಬುರಗಿಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್, ಸಾಮಾಜಿಕ ಕಾರ್ಯಕರ್ತ ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇವರು ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಮೂಲಕ ಮೆಕ್ಕಾ ಪ್ರವಾಸ ಕೈಗೊಂಡಿದ್ದರು.ಉಮ್ರಾ ನಿರ್ವಹಿಸಿ ನಿನ್ನೆ ರಾತ್ರಿ ಬಸ್ ಮೂಲಕ ಮದೀನಾಕ್ಕೆ ಹೋಗುವಾಗ ಬಸ್ ,ಟ್ರಕ್ ಗೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com