ಸೌದಿ ಅರೇಬಿಯಾದಲ್ಲಿ ಮಂಗಳೂರಿನ ಯುವಕ ಮೃತ್ಯು

ಮಂಗಳೂರು:ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಮಂಗಳೂರಿನ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಜೋಕಟ್ಟೆಯ ಕೆಬಿಎಸ್‌ ನಿವಾಸಿ ಅಬ್ದುಲ್‌ ರಝಾಕ್‌ ಅವರ ಪುತ್ರ ಇರ್ಷಾದ್(33) ಎಂದು ಗುರುತಿಸಲಾಗಿದೆ.

ಇರ್ಷಾದ್ ಗೆ ಗುರುವಾರ ಬೆಳಗ್ಗೆ ಹೃದಯಾಘಾತ ಸಂಭವಿಸಿದ್ದು ತಕ್ಷಣ ಅವರ ಗೆಳೆಯರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಇರ್ಷಾದ್ ಅವರು 7 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಇಲೆಕ್ಟ್ರಾನಿಕ್ ಅಂಗಡಿಯೊಂದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಒಂದೂವರೆ ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಸೌದಿಗೆ ತೆರಳಿದ್ದರು.

ಟಾಪ್ ನ್ಯೂಸ್