ಮಹೇಶ್ ಶೆಟ್ಟಿ ತಿಮರೋಡಿ ಜೊತೆ ಸಿಎಂ ಸಿದ್ದರಾಮಯ್ಯಗೆ ಭೇಟಿ ಮಾಡಿದ ಸೌಜನ್ಯ ಫೋಷಕರು

ಬೆಂಗಳೂರು:ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಮಹೇಶ್ ಶೆಟ್ಟಿ ತಿಮರೋಡಿ ಜೊತೆಗೆ ಸೌಜನ್ಯ ಹೆತ್ತವರು ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ಹೆತ್ತವರು ಸಿಎಂ ಬಳಿ ಮರು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಸೌಜನ್ಯ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಉಮೇಶ್ ರಾವ್ ನಿರ್ದೋಷಿ ಎಂದು ಇತ್ತೀಚೆಗೆ ಕೋರ್ಟ್ ತೀರ್ಪಿನ ಬೆನ್ನಲ್ಲೇ ಮತ್ತೆ 11 ವರ್ಷ ಹಳೆಯ ಪ್ರಕರಣ ಮುನ್ನೆಲೆಗೆ ಬಂದಿತ್ತು.

ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸೌಜನ್ಯ ಪರ ಹೋರಾಟಗಾರರು ಹೇಳಿಕೆ ನೀಡುತ್ತಿದ್ದರು.ಈ ಕುರಿತು ನ್ಯಾಯಾಲಯ ಕಳೆದಾರವಷ್ಟೇ ನಿರ್ಬಂಧಕಾಜ್ಞೆ ಕೂಡ ವಿಧಿಸಿದೆ.
ಟಾಪ್ ನ್ಯೂಸ್