ಜಯನಗರದಲ್ಲಿ ನಾಲ್ಕು ಬಾರಿ ಮತ ಎಣಿಕೆ; ಬರೀ 16 ಮತಗಳಿಂದ ಸೌಮ್ಯ ರೆಡ್ಡಿಗೆ ಸೋಲು, ಮೊದಲ ಬಾರಿಗೆ ಮತ ಎಣಿಕೆಯಲ್ಲಿ ಗೆದ್ದುಕೊಂಡಿದ್ದ ಸೌಮ್ಯಗೆ ಮರು ಎಣಿಕೆಯಲ್ಲಿ ಸೋಲು! ಕಣ್ಣೀರು ಹಾಕಿದ ಸೌಮ್ಯ

ಬೆಂಗಳೂರು:ತೀವ್ರ ಕುತೂಹಲ ಕೆರಳಿಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಅಳೆದೂ ಸುರಿದು ಕೇಂದ್ರ ಚುನಾವಣಾ ಆಯೋಗ ಅಂತಿಮವಾಗಿ ಪ್ರಕಟಿಸಿದೆ.

ನಾಲ್ಕು ಬಾರಿ ಎಣಿಸಿ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಗೆಲುವು ಎಂದು ಚುನಾವಣಾ ಆಯೋಗ ಸಾರಿದೆ.

ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮೂರ್ತಿಗೆ 57,797 ಮತಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿಗೆ 57,781 ಮತಗಳು ಎಂದು ಚುನಾವಣಾಧಿಕಾರಿಗಳಿಂದ ಜಯನಗರ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ.

ಕೈ ಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಯಿತಲ್ಲ ಎಂದು ಜಯನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ನಡುರಾತ್ರಿ ಕಣ್ಣೀರು ಹಾಕಿದ್ದಾರೆ.

ಮೊದಲ ಸುತ್ತಿನಲ್ಲಿ 116 ಮತಗಳಿಂದ ಗೆದ್ದುಬೀಗಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಆ ನಂತರ ಮರು ಮರು ಎಣಿಕೆಯಾದಾಗ ಫಲಿತಾಂಶ ತಿರುಗಿತ್ತು.

ಶಾಂತಿಯುತ ಮತದಾನಕ್ಕೆ ಸಹಕರಿಸಿದ ಜಿಲ್ಲೆಯ ಜನತೆಗೆ ಅಭಿನಂದನೆ- ಜಿಲ್ಲಾಧಿಕಾರಿ

ಮಂಗಳೂರು;ರಾಜ್ಯದ ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದರು.

ಮೇ.13ರ ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 2ಗಂಟೆಯವರೆಗೆ ನಡೆದ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ಗಳ ಮತ ಎಣಿಕೆ ಶಾಂತಿ ಯುತವಾಗಿ ನಡೆದಿದೆ. 6ಕ್ಷೇತ್ರ ಗಳಲ್ಲಿ ಬಿಜೆಪಿ ಅಭ್ಯರ್ಥಿ ಗಳು, 2 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಳು ಜಯಗಳಿಸಿದ್ದಾರೆ. ವಿಜೇತರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಈ ಚುನಾವಣೆಯ ಮತ ಎಣಿಕೆಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕಾರ ನೀಡಿದ ಎಲ್ಲಾ ಅಧಿಕಾರಿಗಳು, ವಿವಿಧ ಪಕ್ಷಗಳ ಅಭ್ಯರ್ಥಿಗಳು,ಏಜೆಂಟರು, ಶಾಂತಿ ಸುವ್ಯವಸ್ಥೆಗೆ ಹಗಲು ರಾತ್ರಿ ಜಿಲ್ಲಾಡಳಿತದ ಜೊತೆ ಸಹಕಾರ ನೀಡಿದ ಮಂಗಳೂರು ಪೊಲೀಸ್ ಕಮೀಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅವರ ತಂಡ ಹಾಗೂ ಚುನಾವಣಾ ಕರ್ತವ್ಯ ದಲ್ಲಿ ನನ್ನ ಜೊತೆ ಸಹಕಾರ ನೀಡಿದ ಜಿಲ್ಲೆಯ ಹೊರ ಜಿಲ್ಲೆಯ ಅಧಿಕಾರಿಗಳಿಗೆ,ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಿದ ಜಿಲ್ಲೆಯ ಜನತೆಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com