ಶಾಲಾ ಮಕ್ಕಳಿದ್ದ ಆಟೋ ಭೀಕರ ಅಪಘಾತ;7 ಮಕ್ಕಳು ದುರ್ಮರಣ
ರಾಯ್ಪುರ:ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಏಳು ಶಾಲಾ ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯ್ಪುರದಿಂದ ದಕ್ಷಿಣಕ್ಕೆ 200 ಕಿ.ಮೀ ದೂರದಲ್ಲಿರುವ ಕಂಕೇರ್ ಜಿಲ್ಲೆಯ ಭಾನುಪ್ರತಾಪುರದಲ್ಲಿ ನಡೆದಿದೆ.
ಕೋರೇರ್-ಭಾನುಪ್ರತಾಪುರ ಮಾರ್ಗದಲ್ಲಿ ಶಾಲಾ ಮಕ್ಕಳು ಆಟೋ ರಿಕ್ಷಾದಲ್ಲಿ ಮನೆಗೆ ಮರಳುತ್ತಿದ್ದಾಗ ಆಟೋಗೆ ಟ್ರಕ್ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದು,ಶಾಲಾ ಮಕ್ಕಳ ಸಾವಿಗೆ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಸಂತಾಪ ಸೂಚಿಸಿದ್ದಾರೆ.