ಬೆಂಗಳೂರು;ಬಿಜೆಪಿ ಸರಕಾರದ ಅವಧಿಯಲ್ಲಿ ಮಾಡಲಾಗಿದ್ದ ಪಠ್ಯಪುಸ್ತಕಗಳ ಪರಿಷ್ಕರಣೆಯನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಮತ್ತೆ ಸರಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಬಿಜೆಪಿ ಸರ್ಕಾರ, ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಿಸಿತ್ತು.ಪಠ್ಯ ಪುಸ್ತಕ ಪರಿಷ್ಕರಣೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
10ನೇ ತರಗತಿಯ ಕನ್ನಡ ವಿಷಯದಲ್ಲಿ ಆದರ್ಶ ಪುರಷ ಯಾರಗಬೇಕು ಎನ್ನುವ ಶಿರ್ಷಿಕೆಯಡಿ ಕೆ.ಬಿ. ಹೆಡ್ಗೆವಾರ್ ಪಾಠವನ್ನು ಸೇರ್ಪಡೆ ಮಾಡಲಾಗಿತ್ತು.
ಬಿ.ಸಿ.ನಾಗೇಶ್ ಶಿಕ್ಷಣ ಸಚಿವರಾಗಿದ್ದ ಬಿಜೆಪಿ ಸರ್ಕಾರದಲ್ಲಿ ಹೊಸ ಪಠ್ಯಪುಸ್ತಗಳಲ್ಲಿ ಧಾರ್ಮಿಕ ಚಳುವಳಿ ಮಾಡಿದ, ಬಸವಣ್ಣ, ನಾರಾಯಣ ಗುರು, ವಿವೇಕಾನಂದ, ಪೆರಿಯರ್ ಸಾವಿತ್ರಿ ಬಾಯಿ ಪುಲೆ, ಭಕ್ತಿ ಮತ್ತು ಸೂಫಿ ಪಂತ ತೆಗೆದು ಹಾಕಲಾಗಿದೆ ಎನ್ನಲಾಗಿದೆ.ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು,ಬಿಜೆಪಿ ಮಾಡಿದ ತಪ್ಪನ್ನು ತಿದ್ದಲಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅಧಿಕಾರದ ಅವಧಿಯಲ್ಲಿ ಮಾಡಿರುವ ಪಠ್ಯ ಪುಸ್ತಕ ಪರಿಷ್ಕರಣೆ ತಿದ್ದುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿರುವ ಪಠ್ಯ ಪುಸ್ತಕ ಪರಿಷ್ಕರಣೆಗೆ ವ್ಯಾಪಕವಾಗಿ ಟೀಕೆ ವ್ಯಕ್ತವಾಗಿತ್ತು.ಬಿಜೆಪಿಯ ನಿಲುವನ್ನು ಪಠ್ಯಪುಸ್ತಕದ ಕೇಸರೀಕರಣ ಎಂದು ಟೀಕಿಸಲಾಗಿತ್ತು.
ಇತ್ತೀಚೆಗೆ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಸಾಹಿತಿಗಳ ಸಮಿತಿಯು ಈ ಹಿಂದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಸೂಚಿಸಿತ್ತು.