ಮಂಗಳೂರು; ಶಾಲಾ ಬಾಲಕ ಹೃದಯಾಘಾತದಿಂದ ಮೃತ್ಯು,

ಮಂಗಳೂರು;ಶಾಲೆಗೆ ಹೊರಟಿದ್ದ 9ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಜ.10ರಂದು ನಡೆದಿದೆ.

ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಮೃತ ಬಾಲಕ.

ಶಾಲೆಗೆ ಹೋಗಲು ಬೆಳಗ್ಗೆ ಸಿದ್ದನಾಗಿದ್ದ ಹಸೀಮ್‌ಗೆ ಏಕಾಏಕಿ ತಲೆ ಸುತ್ತಿ ಬಿದ್ದಿದ್ದಾನೆ ಮನೆಯವರು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು‌ ಪರೀಕ್ಷಿಸಿ ಮೃತಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಆದರೂ ಬದುಕಿಸುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದರು.ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆಗೆ ಪಟ್ಟು ಹಿಡಿದ ಹಿನ್ನೆಲೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.ಬಳಿಕ ಮಾಜಿ ಶಾಸಕ ಮೊಯ್ದೀನ್ ಬಾವ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಗೊಳಿಸಲಾಗಿದೆ.

ಟಾಪ್ ನ್ಯೂಸ್