SDPI ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆಗೆ ಸ್ವಾಗತ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿಯಾದ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಗೆ ಅದ್ದೂರಿಯಾಗಿ ಸ್ವಾಗತಿಸಲಾಗಿದೆ.

ಬಿ.ಸಿ ರೋಡ್ ನ ತಲಪಾಡಿ ಟೋಲ್ ಗೇಟ್ ನಿಂದ ಕೈಕಂಬ ಜಂಕ್ಷನ್ ವರೆಗೆ ಸಾಗಿದ ವಾಹನ ಜಾಥಾದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಇಲ್ಯಾಸ್ ಮುಹಮ್ಮದ್ ತುಂಬೆ, ಎಸ್ ಡಿ ಪಿ ಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಎಸ್ ಡಿ ಪಿ ಐ ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋ, ಪಕ್ಷದ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಪಕ್ಷದ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ದ.ಕ ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟಿಸ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಶಾಹುಲ್ ಎಸ್ ಎಚ್, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ, ದ.ಕ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಇನ್ನೋರ್ವ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್