SDPI ಅಭ್ಯರ್ಥಿ ಭಾಸ್ಕರ್ ಪ್ರಸಾದ್ ಗೆ ಉಂಗುರ, ಹಣಕಾಸಿನ ನೆರವು ನೀಡಿ ಆಶೀರ್ವಾದಿಸಿದ ಕ್ಷೇತ್ರದ ಮಹಿಳೆಯರು; ಭಾವುಕರಾಗಿ ಕಣ್ಣೀರು ಹಾಕಿದ ಭಾಸ್ಕರ್ ಪ್ರಸಾದ್; ವಿಡಿಯೋ ವೈರಲ್…

ಬೆಂಗಳೂರು;ಪುಲಕೇಶಿ ನಗರ ಕ್ಷೇತ್ರದ ಎಸ್ ಡಿಪಿಐ ಅಭ್ಯರ್ಥಿ ಭಾಸ್ಕರ್ ಪ್ರಸಾದ್ ಭಾವುಕ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾಸ್ಕರ್ ಪ್ರಸಾದ್ ಗೆ ಚುನಾವಣಾ ವೆಚ್ಚಕ್ಕೆ ಕ್ಷೇತ್ರದ ಮಹಿಳೆಯರು ಹಣಕಾಸಿನ ನೆರವು, ಉಂಗುರ ಸೇರಿ ನೆರವನ್ನು ನೀಡಿದ್ದಾರೆ.

ವಿಡಿಯೋದಲ್ಲಿ ಓರ್ವ ಮಹಿಳೆ ಗೆದ್ದು ಬಂದು ಡಿಜೆ ಹಳ್ಳಿ ಗಲಭೆ ಕೇಸ್ ನಲ್ಲಿ ಅನ್ಯಾಯವಾಗಿ ಬಂಧಿತರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.ಇನ್ನು ಕೆಲವರು ನಮ್ಮ ಮುಸ್ಲಿಮರಿಗೆ ಏನೇ ಸಮಸ್ಯೆಯಿದ್ದರೂ ಅದನ್ನು ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ತನಗೆ ನೆರವು ನೀಡಿದ ಮಹಿಳೆಯರ ಮುಂದೆ ಭಾಸ್ಕರ್ ಪ್ರಸಾದ್ ಈ ವೇಳೆ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.
ಜೊತೆಗೆ ಮಹಿಳೆಯ ಕಾಲಿಗೆ ನಮಸ್ಕರಿಸಿ ಧನ್ಯತಾ ಭಾವವನ್ನು ತೋರಿದ್ದಾರೆ.

ಪುಲಕೇಶಿ ನಗರ ಕ್ಷೇತ್ರದಲ್ಲಿ ಈ ಬಾರಿ ಭಾರೀ ಫೈಪೋಟಿ ಇದ್ದು ಎಸ್ ಡಿಪಿಐನಿಂದ ಭಾಸ್ಕರ್ ಪ್ರಸಾದ್ ಕಣದಲ್ಲಿದ್ದಾರೆ.
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೊಟ್ಟಿಲ್ಲ. ಮಹದೇವಪುರದ ಎಸಿ ಶ್ರೀನಿವಾಸ ಅವರನ್ನು ಕಣಕ್ಕಿಳಿಸಿದೆ. ಇದರಿಂದ ಅಸಮಾಧಾನಗೊಂಡು ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಟಿಕೆಟ್‌ನಲ್ಲಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಇದೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com