ಬೆಂಗಳೂರು;ಎಸ್ ಡಿಪಿಐಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಲು ಕೇಂದ್ರ ಸರಕಾರ ನೀಡಿರುವ ಸೂಚನೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಪಿಎಫ್ ಐ ನಿಷೇಧದ ವೇಳೆ ಎಸ್ ಡಿಪಿಐ ಕಚೇರಿಗಳಿಗೂ ದಾಳಿ ಮಾಡಿ ಪೊಲೀಸರು ಸ್ವತ್ತುಗಳನ್ನು ಜಪ್ತಿ ಮಾಡಿ ಬೀಗ ಹಾಕಿದ್ದರು.
ಪೊಲೀಸರ ನಡೆಯನ್ನು ಖಂಡಿಸಿ ಎಸ್‌ಡಿಪಿಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿದಾರರ ಪರ ವಾದಿಸಿದ ವಕೀಲರು, ದಕ್ಷಿಣ ಕನ್ನಡ ಜಿಲ್ಲೆಯ 17 ಕಚೇರಿಗಳಿಗೆ ಸೀಲ್ ಹಾಕಲಾಗಿದೆ.ಚುನಾವಣೆಗೆ ಸಿದ್ಧತೆ ನಡೆಸಲು ಸೀಲ್‌ಗಳನ್ನು ತೆರವು ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದ್ದರು.