ಬೆಂಗಳೂರು;ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ತಳ್ಳಿ ಹಾಕಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ತಿಳಿಸಿದೆ.
ಹಿಜಾಬ್ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆ ಇಲ್ಲ.ಈ ಕಾರಣಕ್ಕೆ ಯಾವ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗುತ್ತಾರೆ ಎಂಬುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಮಾ.9ರಿಂದ ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.