15 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ, ವಿದ್ಯಾರ್ಥಿನಿಯರು ದೂರು ಹೇಳುತ್ತಿದ್ದಂತೆ ಶಿಕ್ಷಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ, ಶಿಕ್ಷಕನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಉತ್ತರಪ್ರದೇಶದ ಶಹಜಾನ್‌ಪುರದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಿ-ಸೆಕೆಂಡರಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕರೊಬ್ಬರು 15 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮೊಹಮ್ಮದ್ ಅಲಿ ಎಂದು ಗುರುತಿಸಲಾದ ಶಿಕ್ಷಕ ಹಲವಾರು ವಿದ್ಯಾರ್ಥಿಗಳಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಮತ್ತು ಅನೇಕ ವಿದ್ಯಾರ್ಥಿಗಳನ್ನು ನಿಂದಿಸುತ್ತಿದ್ದರು ಎಂದು ಆರೋಪಿಸಿದ್ದಾರೆ.ಈ ಬಗ್ಗೆ ಶಿಕ್ಷಕಿ ಕೂಡಲೇ ಪೊಲೀಸರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದು ಆಕ್ರೋಶಗೊಂಡ ಗ್ರಾಮಸ್ಥರು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಮುಖ್ಯ ಶಿಕ್ಷಕ ಅನಿಲ್ ಕುಮಾರ್ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಈ ನಡುವೆ ಶಿಕ್ಷಣ ಇಲಾಖೆ ಶಾಲೆಯ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕಂಪ್ಯೂಟರ್ ಶಿಕ್ಷಕನಿಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ ಹೆಣ್ಣು ಮಕ್ಕಳ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್ ನಡೆಸಲು ಶಿಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.

ಆರೋಪಕ್ಕೆ ಸಂಬಂಧಿಸಿ ಸಹಕರಿಸಿದ ಓರ್ವ ಶಿಕ್ಷಕಿ ಮತ್ತು ಪ್ರಾಂಶುಪಾಲ ಅನಿಲ್ ಕುಮಾರ್ ಅವರನ್ನು ಕೂಡ ಅಮಾನತುಗೊಳಿಸಲಾಗಿದೆ ಎಂದು ಮೂಲ ಶಿಕ್ಷಣಾಧಿಕಾರಿ (ಬಿಎಸ್‌ಎ) ಕುಮಾರ್ ಗೌರವ್ ತಿಳಿಸಿದ್ದಾರೆ. ಇದಲ್ಲದೆ, ಜಿಲ್ಲೆಯಾದ್ಯಂತ ಎಲ್ಲಾ ಬಾಲಕಿಯರ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್ ಮಾಡಲು ಆದೇಶ ನೀಡಲಾಗಿದೆ ಕುಮಾರ್ ಗೌರವ್ ಹೇಳಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com