ಶಕ್ತಿ ಯೋಜನೆಗೆ ಅಧೀಕೃತವಾಗಿ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ;ಇಂದು ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭ

ಬೆಂಗಳೂರು;ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ `ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ನ್ನು ಬಿಡುಗಡೆ ಮೂಲಕ‌ ಯೋಜನೆಗೆ ಚಾಲನೆ ನೀಡಿದ್ದಾರೆ.ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಲಾಗಿದೆ.

ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ.

ಸಾರಿಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ದಾಖಲಾತಿಗಳನ್ನು ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಟಾಪ್ ನ್ಯೂಸ್