ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಕೊಲೆ, ಅತ್ತೆಯಿಂದ ಕೃತ್ಯ; ಶಾಕಿಂಗ್ ಘಟನೆ ವರದಿ

ವಿವಾಹವಾಗಿ 15 ವರ್ಷ ಕಳೆದರೂ ಮಕ್ಕಳಾಗಿಲ್ಲ ಎಂದು ಮಹಿಳೆಗೆ ವಿಷ ಉಣಿಸಿ ಕೊಲೆ, ಅತ್ತೆಯಿಂದ ಕೃತ್ಯ; ಶಾಕಿಂಗ್ ಘಟನೆ ವರದಿ

ಉತ್ತರಪ್ರದೇಶ; ಮದುವೆಯಾಗಿ 15 ವರ್ಷಗಳಾದರೂ ಮಗುವಾಗಿಲ್ಲ ಎಂದು 33 ವರ್ಷದ ಮಹಿಳೆಗೆ ಅತ್ತೆ ವಿಷ ಆಹಾರ ನೀಡಿ ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಉತ್ತರಪ್ರದೇಶದ ಗ್ರಾಮವೊಂದರಲ್ಲಿ ನಡೆದಿದೆ.

ಸಾಲಿ ಬೇಗಂ ಎಂದು ಗುರುತಿಸಲಾದ ಮಹಿಳೆ ಮೃತರು. ಈಕೆಯ ಅತ್ತೆ, ಮಗುವಾಗದಿದ್ದಕ್ಕಾಗಿ ಅವಳ ಜೊತೆ ಜಗಳವಾಡಿ ವಿಷ ಆಹಾರ ನೀಡಿ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಮೃತಳ ಸಹೋದರ ಗೌಸ್ ಮೊಹಮ್ಮದ್ ತನ್ನ ದೂರಿನಲ್ಲಿ, ಬೇಗಂ 15 ವರ್ಷಗಳ ಹಿಂದೆ ಫಿರೋಜ್ ಅಹ್ಮದ್ ಎಂಬಾತನನ್ನು ಮದುವೆಯಾಗಿದ್ದಳು ಮತ್ತು ಆಕೆಯ ಅತ್ತೆ ಮಗುವನ್ನು ಹೆರಲು ವಿಫಲವಾದ ಕಾರಣ ಆಗಾಗ್ಗೆ ಅವಳೊಂದಿಗೆ ಜಗಳವಾಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತನ್ನ ಸಹೋದರಿಯ ಕರೆಯನ್ನು ಸ್ವೀಕರಿಸಿದ ನಂತರ, ಮೊಹಮ್ಮದ್ ಆಕೆಯ ಮನೆಗೆ ತೆರಳಿ ನೋಡಿದಾಗ ಆಕೆಯ ಸ್ಥಿತಿ ಗಂಭೀರವಾಗಿತ್ತು ಎಂದು ದೂರಿನಲ್ಲಿ ಸೇರಿಸಲಾಗಿದೆ.

ನಂತರ ಆಕೆಯನ್ನು ಸಿರತುವಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆಯನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಪ್ರಕರಣಕ್ಕೆ ಸಂಬಂಧಿಸಿ ಮೊಹಮ್ಮದ್ ಅವರ ದೂರಿನ ಆಧಾರದ ಮೇಲೆ ಮಹಿಳೆಯ ಪತಿ ಮತ್ತು ಅವರ ಕುಟುಂಬದ ನಾಲ್ವರ ವಿರುದ್ಧ ಕಡಧಾಮ್ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಿಸಲಾಗಿದೆ ಎಂದು ಕೌಶಂಬಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಸಮರ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದೂ ಯುವತಿಯನ್ನು “ಕೇರಳ ಸ್ಟೋರಿ” ವೀಕ್ಷಿಸಲು ಕರೆದೊಯ್ದ ಸಂಸದೆ ಪ್ರಜ್ಞಾ ಸಿಂಗ್; ಆಕೆ ಸಿನಿಮಾ ನೋಡಿದ ಮರುದಿನವೇ ತನ್ನ ಮುಸ್ಲಿಂ ಪ್ರೇಮಿಯೊಂದಿಗೆ ಪರಾರಿ!- ವರದಿ

ಭೋಪಾಲ್‌; 19 ವರ್ಷದ ಹಿಂದೂ ಸಮುದಾಯದ ನರ್ಸಿಂಗ್ ವಿದ್ಯಾರ್ಥಿನಿ ತನ್ನ ನಿಗದಿಯಾಗಿದ್ದ ಮದುವೆಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com