ತುಮಕೂರು;ಪತ್ನಿ ಮತ್ತು ಮಕ್ಕಳು ಮಲಗಿದ್ದ ವೇಳೆ ಅವರ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ
ಮಧುಗಿರಿ ಮದ್ದನೇರಳೆಕೆರೆ ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಪತ್ನಿ ಶಾಂತಮ್ಮ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮಕ್ಕಳಾದ ಅಕ್ಷಯ(18),ಅಕ್ಷತಾ(13) ಮತ್ತು ಅಮೃತಾ(10)ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತ್ನಿ ಮತ್ತು ಮಕ್ಕಳು ಮಲಗಿದ್ದ ವೇಳೆ ಅವರ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ರೂಮಿಗೆ ಬೀಗ ಹಾಕಿ ಪತಿ ಪರಾರಿಯಾಗಿದ್ದ.ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.