ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ;ಆರೋಪಿಗಳ ಕುರಿತು ಪೊಲೀಸರಿಗೆ ಸುಳಿವು ಲಭ್ಯ

ಕಾಪು;ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಲಭಿಸಿದೆ ಎನ್ನಲಾಗಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್ ನೇತೃತ್ವದ ಮೂರು ಪೊಲೀಸ್ ತಂಡಗಳು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ.ಕೊಲೆಯಾದ ಶರತ್ ಅವರ ಮೊಬೈಲ್ ಮಾಹಿತಿ ಮತ್ತು ಸಿಸಿಟಿವಿ ವಿಡಿಯೋ ಆಧಾರದಲ್ಲಿ ತನಿಖೆ ನಡೆಯುತ್ತಿದೆ.
ಕೊಲೆಗೆ ಸಂಬಂಧಿಸಿ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿರುವುದರಿಂದ ಪೊಲೀಸರು ಈ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿ ವಿಕೃತಿ ಮೆರೆದ ಆಟೋ ಚಾಲಕ; ಕೃತ್ಯವನ್ನು ಕಂಡು ಪೊಲೀಸರಿಗೆ‌ ಮಾಹಿತಿ ನೀಡಿದ ವಿದ್ಯಾರ್ಥಿನಿಯರು

ಲೇಡಿಸ್ ಹಾಸ್ಟೆಲ್ ಬಳಿ ತೆರಳಿ ಖಾಸಗಿ ಅಂಗ ಪ್ರದರ್ಶಿಸಿದ ಆಟೋ ಚಾಲಕ; ಕೃತ್ಯವನ್ನು

Developed by eAppsi.com