ಉಪ್ಪಿನಂಗಡಿ; ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು

-ಶರೀಪುದ್ದೀನ್(19) ಮೃತ ಯುವಕ.

ಉಪ್ಪಿನಂಗಡಿ; ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ.

ಶರೀಪುದ್ದೀನ್(19) ಮೃತ ಯುವಕ.ಶರೀಪುಧ್ದೀನ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ.

ಘಟನೆಯ ಬಗ್ಗೆ ಹಿರೇಬಂಡಾಡಿ ನಿವಾಸಿ ಹುಮ್ಮಬ್ಬ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.ದೂರಿನಲ್ಲಿ
ಸಂಜೆ 7-30 ಗಂಟೆಗೆ ಸಾರ್ವಜನಿಕರ ಮೂಲಕ ನನ್ನ ತಂಗಿಯ ಮಗ ಶರೀಪುದ್ದೀನ್ ರವರಿಗೆ ಪುತ್ತೂರು ತಾಲೂಕು ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿಧ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡಿರುವ ಬಗ್ಗೆ ಮಾಹಿತಿ ಬಂದಿದೆ.

ಸ್ಥಳೀಯರು ಅವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಪುತ್ತೂರು ಸರಕಾರಿ ಆಸ್ಪತ್ರೆಗೆ ತೆರಳಿ ನೋಡಿದಾಗ ಶರೀಪುದ್ದೀನ್ ರವರು ಮೃತಪಟ್ಟಿದ್ದು ಆತನ ಎದೆಯ ಭಾಗದಲ್ಲಿ ವಿಧ್ಯುತ್ ಸ್ಪರ್ಶ ಆಗಿರುವುದು ಕಂಡು ಬಂದಿದೆ ಎಂದು ದೂರಿನಲ್ಲಿ‌ ತಿಳಿಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಯುಡಿಆರ್ ನಂಬ್ರ 27/2023 ಕಲಂ:174 CRPC ಯಂತೆ ಪ್ರಕರಣ ದಾಖಲಾಗಿರುತ್ತದೆ.

ಶರೀಪುದ್ದೀನ್ ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.ಇದೀಗ ಬಾಲಕನ ಅಗಲಿಕೆಯಿಂದ ತಾಯಿ ಕಣ್ಣೀರಲ್ಲಿ ಮುಳುಗಿದ್ದಾರೆ.

ಟಾಪ್ ನ್ಯೂಸ್

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ ಉದ್ವಿಗ್ನತೆ, ನಿಷೇಧಾಜ್ಞೆ ಜಾರಿ

ಟಿಪ್ಪು & ಔರಂಗಜೇಬ್ ಬಗ್ಗೆ ಪೋಸ್ಟ್ ವಿವಾದ, ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಸ್ಥಳದಲ್ಲಿ

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ ಹಣ ಪಡೆಯಲು ಯತ್ನಿಸಿದ ಮಹಿಳೆ; ವಿಷಯ ಗೊತ್ತಾಗಿ ಪತಿಯೇ ಪತ್ನಿಯ ವಿರುದ್ಧ ದೂರು ಕೊಟ್ಟ!

ಒಡಿಶಾ ರೈಲು ದುರಂತದಲ್ಲಿ ಪತಿ ಸತ್ತಿದ್ದಾನೆಂದು ಸುಳ್ಳು ಹೇಳಿ 17 ಲಕ್ಷ ಪರಿಹಾರದ

ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆ; ಮಕ್ಕಳು ಆಟವಾಡುವಾಗ ಆಕಸ್ಮಿಕವಾಗಿ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ

ನವದೆಹಲಿ; ಮರದ ಪೆಟ್ಟಿಗೆಯಲ್ಲಿ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಶಾಕಿಂಗ್ ಘಟನೆ ರಾಷ್ಟ್ರ

Developed by eAppsi.com