ಖೋಖೋ ಆಡುವಾಗ ಕುಸಿದು ಬಿದ್ದು ಶಾಲಾ ಬಾಲಕ ಮೃತ್ಯು

ಖೋಖೋ ಆಡುವಾಗ ಕುಸಿದು ಬಿದ್ದು ಶಾಲಾ ಬಾಲಕ ಮೃತ್ಯು

ಮೈಸೂರು:ಖೋಖೋ ಆಡುವಾಗ ಬಾಲಕನೋರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಎಚ್. ಎಸ್ ಪಾಪಣ್ಣ ಮತ್ತು ಕುಮಾರಿ ದಂಪತಿ ಪುತ್ರ ಶಶಾಂಕ್(13) ಮೃತ ವಿದ್ಯಾರ್ಥಿ.

ಶಶಾಂಕ್ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ.ತರಗತಿ ಅವಧಿ ಮುಗಿದ ನಂತರ ವಿದ್ಯಾರ್ಥಿಗಳು ಖೋಖೋ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಶಶಾಂಕ್ ಕುಸಿದು ಬಿದ್ದಿದ್ದಾನೆ.

ತಕ್ಷಣ ಆತನನ್ನು ಹೆಚ್​.ಡಿ ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಸಾವನ್ನಪ್ಪಿದ್ದಾನೆ.

ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್