ಜಗದೀಶ್​ ಶೆಟ್ಟರ್ ​ಗೆ ಬೆಂಗಳೂರಿಗೆ ಬರುವಂತೆ ಕಾಂಗ್ರೆಸ್​ ನಾಯಕರಿಂದ ಬುಲಾವ್; ಏನಿದು ಬೆಳವಣಿಗೆ?

ಬೆಂಗಳೂರು;ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಲಿಂಗಾಯತ ನಾಯಕ ಜಗದೀಶ್ ಶೆಟ್ಟರ್ ಗೆ ಇದೀಗ ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರ್​ಗೆ ಕಾಂಗ್ರೆಸ್ ನಾಯಕರು ಬುಲಾವ್ ನೀಡಿದ್ದಾರೆ‌ ಎನ್ನಲಾಗಿದೆ.

ಪ್ರಬಲ ಲಿಂಗಾಯತ ನಾಯಕನಾಗಿರುವ ಜಗದೀಶ್ ಶೆಟ್ಟರ್
ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.ಸುಮಾರು 34,053 ಮತಗಳ ಅಂತರದಿಂದ ಮೊದಲ ಬಾರಿಗೆ ಬಿಜೆಪಿಯ ಮಹೇಶ್ ಟೆಂಗಿನಕಾಯಿ ವಿರುದ್ಧ ಸೋತಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಸುರ್ಜೇವಾಲಾ, ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್ ಅವರು ಬೆಂಗಳೂರಿಗೆ ಬರುವಂತೆ ಜಗದೀಶ್ ಶೆಟ್ಟರ್​ಗೆ ಬುಲಾವ್ ನೀಡಿದ್ದಾರೆ.

ಅದಂತೆ ಈಗ ಜಗದೀಶ್ ಶೆಟ್ಟರ್​ ಹುಬ್ಬಳ್ಳಿಯಿಂದ ಬೆಂಗಳೂರಿನತ್ತ ಹೊರಟ್ಟಿದ್ದಾರೆ. ಕಾಂಗ್ರೆಸ್ ಅಲೆ ಇದ್ದರೂ ಜಗದೀಶ್ ಶೆಟ್ಟರ್ ಸೋಲಿನ ಬಗ್ಗೆ ಹಿರಿಯ ನಾಯಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಈಗಾಗಲೇ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್, ಹೈಕಮಾಂಡ್​ ಯಾವುದಾದರೂ ಹುದ್ದೆ ನೀಡಿದರೆ ಸ್ವೀಕರಿಸುತ್ತಾರಾ ಅಥವಾ ನಿರಾಕರಿಸುತ್ತಾರೋ ಎನ್ನುವುದು ಕಾದು ನೋಡಬೇಕಿದೆ.

ಶೆಟ್ಟರ್ ಕ್ಷೇತ್ರದಿಂದ ಸತತ ಏಳನೇ ಬಾರಿಗೆ ಗೆಲುವಿನ ಗುರಿ ಹೊಂದಿದ್ದರು. ಹುಬ್ಬಳ್ಳಿಯ ಒಟ್ಟು 15 ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಗೆದ್ದಿದ್ದು, ಜೆಡಿಎಸ್ ಮೂರು ಮತ್ತು ಬಿಜೆಪಿ ಏಳು ಸ್ಥಾನಗಳನ್ನು ಹಂಚಿಕೊಂಡಿವೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com