ಶಿಮ್ಲಾ:ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಸರಕಾರಿ ಬಸ್ ಚಾಲಕನೋರ್ವನಿಗೆ ಕಾರು ಮಾಲಕನ ಕಾಲಿಗೆ ಬಿದ್ದು ಚಾಲಕ ಮೂಗು ಉಜ್ಜುವ ಮೂಲಕ ಕ್ಷಮೆಯಾಚಿಸುವಂತೆ ಮಾಡಲಾಗಿದೆ.
ಈ ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಓವರ್ ಟೇಕ್ ಮಾಡುವ ವಿಚಾರದಲ್ಲಿ ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಮತ್ತು ಕಾರಿನ ಚಾಲಕನ ನಡುವೆ ವಾಗ್ವಾದ ನಡೆದಿದೆ.ಈ ಸಂಬಂಧ ಕಾರಿನ ಮಾಲೀಕ ಬಸ್ ಚಾಲಕನ ವಿರುದ್ಧ ದೂರು ನೀಡಿದ್ದಾರೆ.
ನಂತರ ಇಬ್ಬರ ನಡುವೆ ರಾಜಿ ಪಂಚಾಯಿತಿ ಮಾಡಿಸಲಾಗಿದೆ. ಈ ವೇಳೆ ಕಾರು ಮಾಲೀಕನ ಕಾಲಿಗೆ ಬಸ್ ಚಾಲಕನಿಂದ ಮೂಗು ಉಜ್ಜಿಸಿ ಕ್ಷಮೆ ಕೋರುವಂತೆ ಮಾಡಲಾಗಿದೆ.ಈ ಸಂದರ್ಭದಲ್ಲಿ ಪೊಲೀಸರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.