ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ಭೇಟಿ

-ಆಸೀಫ್(25) ಮೃತ ಯುವಕ.

ಶಿವಮೊಗ್ಗ;ಯುವಕನೋರ್ವನಿಗೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ
ಇಲಿಯಾಸ್ ನಗರದ ನೂರು ಅಡಿ ರಸ್ತೆ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆಸೀಫ್ (25)ಮೃತ ಯುವಕ.ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಆಸೀಫ್(25) ಎಂಬಾತನಿಗೆ
ಜಬಿ ಎಂಬಾತ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ. ಮೃತ ಯುವಕ ಶಿವಮೊಗ್ಗದ ಮಂಡ್ಲಿ ನಿವಾಸಿ ಎಂಬ ಮಾಹಿತಿ ಲಭ್ಯವಾಗಿದೆ.

ಅಸೀಫ್ ಇಲಿಯಾಸ್ ನಗರಕ್ಕೆ ಬಂದಿದ್ದ ವೇಳೆ ಅದೇ ಏರಿಯಾದ ಜಬೀ ಎಂಬಾತ ದಾಳಿ ನಡೆಸಿದ್ದು, ಏಕಾಏಕಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದ ಆಟೋ ಡ್ರೈವರ್ ಅಸೀಫ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಅಸೀಫ್ ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ‌‌.

ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್‌ ಕುಮಾರ್, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಲಾಗಿದೆ.
ಅಲ್ಲದೆ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗೆ ವಿಚಾರಣೆ ನಡೆಸಲಾಗುತ್ತಿದ್ದು, ಕೃತ್ಯದ ಹಿಂದಿನ‌ ಕಾರಣ ತನಿಖೆಯಿಂದ ಬಯಲಾಗಬೇಕಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ