ಶಿವಮೊಗ್ಗ ಡಿಸಿ ಕಚೇರಿ ಬಳಿ ಅಝಾನ್ ಕೊಟ್ಟ ಆರೋಪ, ದೂರು ದಾಖಲು

ಶಿವಮೊಗ್ಗ:ಅಝಾನ್ ವಿರುದ್ಧ ಶಾಸಕ ಈಶ್ವರಪ್ಪ ಕೊಟ್ಟ ಹೇಳಿಕೆಯನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಯುವಕನೋರ್ವ ಶಿವಮೊಗ್ಗ ಡಿಸಿ ಕಚೇರಿ ಬಳಿ ಅಝಾನ್ ಕೊಟ್ಟು ಪ್ರತಿಭಟಿಸಿರುವ ವಿಡಿಯೋ ವೈರಲ್ ಆಗಿದ್ದು, ಇದೀಗ ಆ ಯುವಕನ ವಿರುದ್ಧ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಯುವಕ ಅಝಾನ್ ಕೊಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.ಈ ಬಗ್ಗೆ ಆಕ್ಷೇಪ ಕೂಡ ಕೇಳಿ ಬಂದಿತ್ತು. ಈ ಕುರಿತು ಯುವಕನಿಗೆ ಕರೆದು ಎಚ್ಚರಿಕೆ ನೀಡಿರುವುದಾಗಿ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ.

ಇದಲ್ಲದೆ ಈ ಕುರಿತು ಪ್ರಕರಣ ಕೂಡ ದಾಖಲಾಗಿದೆ. ಈಶ್ವರಪ್ಪ ಅಝಾನ್ ವಿರುದ್ಧ ಕೊಟ್ಟ ಹೇಳಿಕೆ ವಿರುದ್ಧ ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಈಶ್ವರಪ್ಪ, ಅಝಾನ್ ಶಬ್ಧ ಕೇಳಿ, ನಾನು ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಅನ್ನುತ್ತೇವೆ. ಸುಪ್ರೀಂಕೋರ್ಟ್ ಆದೇಶವಿದ್ದು ಇಂದಲ್ಲ, ನಾಳೆ ಈ ಸಮಸ್ಯೆ ಇತ್ಯರ್ಥವಾಗಲಿದೆ
ಎಂದು ಹೇಳಿಕೆ‌ ಕೊಟ್ಟಿದ್ದರು.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com