ಬೈಕ್ ಅಪಘಾತ; ಕಾಲೇಜು ವಿದ್ಯಾರ್ಥಿ ಮೃತ್ಯು
ಶಿವಮೊಗ್ಗ:ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗದ 60 ಅಡಿ ರಸ್ತೆಯಲ್ಲಿ ನಡೆದಿದೆ.
ಗೌತಮ್ (21) ಮೃತ ವಿದ್ಯಾರ್ಥಿ.
ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ಗೌತಮ್ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ.
ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬೈಕ್ ಅಪಘಾತಕ್ಕೀಡಾಗಿ ಗೌತಮ್‌ಗೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಅತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.