ಶಿವಮೊಗ್ಗದಲ್ಲಿ ಮತ್ತೆ ಗಲಾಟೆ,ಸೆಕ್ಸನ್ ವಿಸ್ತರಣೆ
ಶಿವಮೊಗ್ಗ;ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿರುವ ಘಟನೆ ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದಿದೆ.ಸಾವರ್ಕರ್ ಫೋಟೋ ವಿವಾದದಿಂದ ಉಂಟಾದ ಘರ್ಷಣೆಯ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ನಡೆದಿದೆ.
ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ.
ಇದರ ಮುಂದುವರಿದ ಭಾಗವಾಗಿ ಬಸ್ ನಿಲ್ದಾಣದ ಬಳಿ ಯುವಕರ ನಡುವೆ ಹೊಡೆದಾಟ ನಡೆದಿದೆ.
ಶಾಲಾ ಮಕ್ಕಳ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ವ್ಯಕ್ತಿಯೊಬ್ಬರು ಅಡ್ಡಲಾಗಿ ಚೇರನ್ನು ಹಾಕಿಕೊಂಡು ಕುಳಿತುಕೊಂಡಿದ್ದರು. ಆಗ ಪಕ್ಕಕ್ಕೆ ಸರಿಯುವಂತೆ ಶಿಕಾರಪುರದ ಮಂಚಿನಕೊಪ್ಪ ಗ್ರಾಮದ ವ್ಯಕ್ತಿ ಹೇಳಿದ್ದಾರೆ. ಇದಕ್ಕೆ ಸಿಟ್ಟಿಗೆದ್ದ ಚೇರ್ನಲ್ಲಿ ಕುಳಿತಿದ್ದ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಬೈದು ಕಪಾಳಕ್ಕೆ ಹೊಡೆದಿದ್ದಾರೆ.
ನಂತರ ತಮ್ಮ ಊರಿಗೆ ಹೋಗಲೆಂದು ಬೈಕ್‌ಗಳಲ್ಲಿ ಹಿಂದಿರುಗುತ್ತಿದ್ದಾಗ,ಗಲಾಟೆ ಮಾಡಿದ ವ್ಯಕ್ತಿಯು ಇತರರ ಜೊತೆ ಬಂದು ಹಲ್ಲೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಗಲಾಟೆಯಲ್ಲಿ ಓರ್ವ ಯುವಕನಿಗೆ ಗಾಯವಾಗಿದ್ದು,ಸ್ಥಳೀಯ ಆಸ್ಪತ್ರೆ ದಾಖಲು ಮಾಡಲಾಗಿದೆ.
ಘಟನೆಯಿಂದ ಶಿವಮೊಗ್ಗದ ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ವಿಸ್ತರಿಸಲಾಗಿದೆ. ಆಗಸ್ಟ್ 26ರಂದು ಬೆಳಗ್ಗೆ ಆರು ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶಿಸಿದ್ದಾರೆ.