ಶಿವಮೊಗ್ಗ; ಮಾರಕಾಸ್ತ್ರದಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ

ಶಿವಮೊಗ್ಗ: ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ‌ ಮಾಡಿರುವ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಬಳ್ಳಿ ಗ್ರಾಮದ ನಿವಾಸಿ ಸೈಯದ್ ರಾಜಿಕ್(30) ಕೊಲೆಯಾದವರು.

ಕಳೆದ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ‌ ಕೊಲೆ ಮಾಡಿದ್ದಾರೆ. ವೈಯಕ್ತಿಕ ಕಾರಣಕ್ಕೆ ಕೊಲೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಬಾಬಳ್ಳಿ ಗ್ರಾಮದ ಹೊರ ಭಾಗದ ಜಮೀನಿನಲ್ಲಿ ಕೊಲೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು‌ಬಂದಿಲ್ಲ.

ಈ ಕುರಿತು ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.

ಟಾಪ್ ನ್ಯೂಸ್