ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೆ ಯತ್ನ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಸೆರೆ

ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೆ ಯತ್ನ; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಸೆರೆ

ಶಿರಸಿ;ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶಿರಸಿಯ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.‌

ಆಂದ್ರಪ್ರದೇಶದ ಮೂಲದ ರಾಯಚೂಟಿ ತಾಲೂಕಿನ ಶಿವ ರಾಮಯ್ಯ (26) ಬಂಧಿತ ಆರೋಪಿ.ಈತ ಕಳೆದ ಕೆಲ ತಿಂಗಳಿನಿಂದ ಶಿರಸಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.

ಈತ ಕೆಲಸ ಮಾಡುತ್ತಿದ್ದ ಸ್ಥಳದ ಸಮೀಪದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ವೈರ್‌ನಿಂದ ಕೊಲೆಗೆ ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಮಗು ಜೋರಾಗಿ ಅತ್ತ ಕಾರಣ ಶಬ್ದ ಕೇಳಿ ಅಕ್ಕಪಕ್ಕದ ಜನರು ಓಡಿ ಬಂದಿದ್ದರು.ಅಲ್ಲಿಂದ ಆರೋಪಿ ಪರಾರಿಯಾಗಿದ್ದ.

ತಪ್ಪಿಸಿಕೊಂಡು ಪರಾರಿ ಯಾಗುತ್ತಿದ್ದವನನ್ನು ಸಾರ್ವಜನಿಕರ ಸಹಕಾರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ