-ಮುಜಾಯಿದ್ದೀನ್(32)ಕೊಲೆಯಾದ ದುರ್ದೈವಿ.
ಶಿವಮೊಗ್ಗ:ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಓರ್ವನಿಗೆ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮುಜಾಯಿದ್ದೀನ್(32) ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಮಾರಕಾಯುಧದಿಂದ ಈತನ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ.
ಮುಜಾಯಿದ್ದೀನ್ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾತ್ರಿ ಸುಮಾರು 12.30ರ ಸಮಯದಲ್ಲಿ ಘಟನೆ ನಡೆದಿದೆ. ರಾತ್ರಿ ಮನೆಯಿಂದ ಹೊರಗೆ ಬಂದಾಗ ಹತ್ಯೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಕುರಿತಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.